CHOMANA DUDI by Dr. K. Shivarama Karanth
This novel Includes a social plot. An untouchable lowlander named Choma works as a slaveholder in a village near a landlord. Although he has a passion for farming and farming, he is unable to plow because of his social position. He farmed two oxen found in the wild. But they are not used for plowing. In this case, Christian missionaries see Choman as a landlord and convert. But Choma refuses to give up his faith and convert. He overcomes the frustration of his fate with the beatings of labor. ಈ ಕಾದಂಬರಿಯು ಸಾಮಾಜಿಕ ಕಥಾವಸ್ತುವನ್ನು ಒಳಗೊಂಡಿದೆ. ಚೋಮ ಎಂಬ ಅಸ್ಪೃಶ್ಯ ಕೆಳಜಾತಿಯ ಮನುಷ್ಯ ಒಂದು ಹಳ್ಳಿಯಲ್ಲಿ ಜಮೀನ್ದಾರನೊಬ್ಬನ ಬಳಿ ಜೀತದಾಳಾಗಿ ಕೆಲಸ ಮಾಡುತ್ತಿರುತ್ತಾನೆ. ಅವನಿಗೆ ತನ್ನ ಜಮೀನನ್ನು ಉಳುವ, ಬೇಸಾಯ ಮಾಡುವ ಉತ್ಕಟ ಆಸೆ ಇದ್ದರೂ ಸಹ ಅವನ ಸಾಮಾಜಿಕ ಸ್ಥಾನದ ಕಾರಣದಿಂದಾಗಿ ಉಳುಮೆ ಮಾಡಲು ಸಾಧ್ಯವಾಗಿರುವುದಿಲ್ಲ. ಕಾಡಿನಲ್ಲಿ ಸಿಕ್ಕಿದ ಎರಡು ಎತ್ತುಗಳನ್ನು ಅವನು ಸಾಕಿಕೊಂಡಿರುತ್ತಾನೆ. ಆದರೆ ಅವುಗಳನ್ನ ಉಳುಮೆಗೆ ಬಳಸಿಕೊಳ್ಳಲಾಗುತ್ತಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಕ್ರಿಶ್ಚಿಯನ್ ಧರ್ಮಪ್ರಚಾರಕರು ಚೋಮನನ್ನು ಜಮೀನು ಉಳುಮೆಯ ಆಮಿಷ ತೋರಿಸಿ ಮತಾಂತರಗೊಳಿಸಲು ನೋಡುತ್ತಾರೆ. ಆದರೆ ಚೋಮ ತನ್ನ ನಂಬಿಕೆಯನ್ನು ಬಿಟ್ಟು ಮತಾಂತರಗೊಳ್ಳಲು ಒಪ್ಪುವುದಿಲ್ಲ. ಅವನು ದುಡಿ ಬಡಿಯುವ ಮೂಲಕ ತನ್ನ ಹಣೆಬರಹದ ಸಿಟ್ಟಿನ ಹತಾಶೆಯನ್ನು ಹೊರಹಾಕುತ್ತಾನೆ.
Reviews
There are no reviews yet.